ಅಪರಾಧ ಸುದ್ದಿ

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾದ ಟೆಕ್ಕಿ ದಂಪತಿ‌ ಮೃತದೇಹ!

Share It

ಬೆಂಗಳೂರು : ಟೆಕ್ಕಿ ದಂಪತಿಯ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ ಥಣಿಸಂದ್ರ ಮುಖ್ಯ ರಸ್ತೆಯ ನಿಕೂ ಹೋಮ್ಸ್ – 1 ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ ಮೂಲದ ಬಾನು ಚಂದರ್ ರೆಡ್ಡಿ (32) ಅವರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಪತ್ನಿ ಬೀಬಿ ಶಾಜಿಯಾ ಸಿರಾಜ್ (31) ಅಪಾರ್ಟ್‌ಮೆಂಟ್ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊತ್ತನೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಅಸಹಜ ಸಾವಿನ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ”ಮೃತರ ಮನೆಯಲ್ಲಿ ಡೆತ್​ನೋಟ್ ಅಥವಾ ಬೇರೆ ಯಾವುದೇ ಸೂಚನೆಗಳಿವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮನೆಯಲ್ಲಿ ಪತಿ ನೇಣಿಗೆ ಶರಣಾದ ಬಳಿಕ ಪತ್ನಿ ಶಾಜಿಯಾ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.


Share It

You cannot copy content of this page