ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಇದೇ ಅಕ್ಟೋಬರ್ 22ರಿಂದ ಆರಂಭವಾಗಲಿರುವ ಟಿ-20 ಸರಣಿಗೆ ಆರ್ಸಿಬಿಯ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್ ಆಯ್ಕೆಯಾಗಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ತಂಡದಿಂದ ಹೊರಗುಳಿದಿದ್ದ ಭುವನೇಶ್ವರ್ ಕುಮಾರ್ ಆರ್ಸಿಬಿ ತಂಡ ಸತತ ಎರಡು ಬಾರಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಐಪಿಎಲ್ ಮಾತ್ರವಲ್ಲೇ ಸ್ಥಳೀಯ ಟೂರ್ನಿಗಳಲ್ಲಿಯೂ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದ್ದರು.
ಆದರೂ, ಸತತವಾಗಿ ಭಾರತ ಆಯ್ಕೆ ಸಮಿತಿಯಿಂದ ಕಡೆಗಣನೆಗೆ ಒಳಗಾಗಿದ್ದ ಭುವನೇಶ್ವರ್ ಕುಮಾರ್ ಆಯ್ಕೆ ಮಾಡುವಂತೆ ಒತ್ತಡ ಹಾಕಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಆಯ್ಕೆ ಸಮಿತಿಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಅನೇಕ ಹಿರಿಯ ಆಟಗಾರರು ಭುವನೇಶ್ವರ್ ಆಯ್ಕೆ ಮಾಡದ ಸಮಿತಿಯ ನಡೆಯ ಬಗ್ಗೆ ಟೀಕೆ ಮಾಡಿದ್ದರು. ಅವರನ್ನು ಮತ್ತೇ ತಂಡಕ್ಕೆ ಯಾಕೆ ಆಯ್ಕೆ ಮಾಡಬೇಕು ಎಂಬ ಬಗ್ಗೆ ವಿಶ್ಲೇಷಣೆ ನಡೆಸಿ, ಆಯ್ಕೆ ಸಮಿತಿಯ ಅಧ್ಯಕ್ಷರು ಮತ್ತು ತಂಡಕ್ಕೆ ಬಿಸಿ ಮುಟ್ಟಿಸಿದ್ದರು.
ಈ ಎಲ್ಲ ಬೆಳವಣಿಗೆಯ ನಡುವೆ ಭುವನೇಶ್ವರ್ ಕುಮಾರ್ ಶ್ರೇಯಸ್ ಅಯ್ಯರ್ ನಾಯಕತ್ವದ ಅ-20 ತಂಡಕ್ಕೆ ಆಯ್ಕೆಯಾಗಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನ್ಯೂಜಿಲೆಂಡ್ನ ಬೌನ್ಸಿ ಪಿಚ್ಗಳಲ್ಲಿ ಭುವನೇಶ್ವರ್ ಆಯ್ಕೆಯನ್ನು ಸಮರ್ಥನೆ ಮಾಡಿಕೊಳ್ಳಲಿದ್ದಾರೆ ಎಂಬುದು ಅಭಿಮಾನಿಗಳ ಆಶಯವಾಗಿದೆ.
