ರಾಮನಗರ; ರೈತರ ಹೋರಾಟದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಕುರಿತ ಪ್ರಕರಣಕ್ಕೆ ಸಂಬAಧಿಸಿದAತೆ ರೈತರ ಮೇಲೆ ಎರಡು ಎಫ್ಐಆರ್ ದಾಖಲಾಗಿದೆ.
ಬಿಡದಿಯಲ್ಲಿ ನಡೆಯುತ್ತಿದ್ದ ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ರೈತರು ಹಲ್ಲೆ ಮಾಡಿದ್ದರು. ಜತೆಗೆ ಕಾರನ್ನು ಜಖಂಗೊಳಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೈತರ ವಿರುದ್ಧ ದೂರು ದಾಖಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ಮುರುಳಿ ಅವರ ದೂರಿನ ಅನ್ವಯ ಪ್ರಕರಣ ದಾಖಲಾಗಿದ್ದು, ರೈತರ ವಿರುದ್ಧ ಪ್ರಕರಣ ದಾಖಲಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸರಕಾರದ ಕ್ರಮವನ್ನು ವಿರೋಧಿಸಿ, ರಸ್ತೆ ತಡೆ ನಡೆಸಲಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಅವರು ಕೂಡ ಘಟನೆಯನ್ನು ಖಂಡಿಸಿದ್ದಾರೆ.

