ಬೆಂಗಳೂರು: ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಇಬ್ಬರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಾಯ್ಸ್ ವರ್ಸಸ್ ಗರ್ಲ್ಸ್ ಕಾರ್ಯಕ್ರಮದ ಶೂಟಿಂಗ್ ನಂತರ ರೀಲ್ಸ್ ಮಾಡಿದ್ದರು. ಈ ವೇಳೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ನೊಟೀಸ್ ನೀಡಿದ್ದ ಪೊಲೀಸರು, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದಿದ್ದರು. ವಿಚಾರಣೆಗೆ ಆಗಮಿಸಿದ್ದ ವೇಳೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.
ಬಿಗ್ ಬಾಸ್-10 ಮತ್ತು 11ರ ಸೀಸನ್‌ನ ಸ್ಪರ್ಧಿಗಳಾಗಿದ್ದ ಈ ಇಬ್ಬರು ಸ್ಪರ್ಧಿಗಳು ತಮ್ಮ ಗತ್ತು ದೌಲತ್ತುಗಳಿಂದಲೇ ಹೆಸರು ಮಾಡಿದ್ದರು. ಅವರ ನಡವಳಿಕೆಯಿಂದ ಕೆಲವರ ಕೆಂಗಣ್ಣಿಗೂ ಗುರಿಯಾಗಿದ್ದರು. ದುರಂಹಕಾರದ ಮಾತುಗಳಿಂದಲೇ ಬಿಗ್ ಬಾಸ್ ಮನೆಯಲ್ಲಿ ಕೆಟ್ಟ ಕಮೆಂಟ್‌ಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ಇದೀಗ ಬಂಧನದ ಸಂಕಷ್ಟ ಎದುರಾಗಿದೆ.