ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕೊಲೆ ಪ್ರಕರಣದಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದು, ಕಳೆದ ಹತ್ತು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದ್ದು, ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ. ನ್ಯಾಯಾಲಯ ಜಾಮೀನು ನೀಡಲು ಎರಡು ಲಕ್ಷ ರು. ಬಾಂಡ್ ನೀಡುವಂತೆ ತಾಕೀತು ಮಾಡಿದೆ.
ಷರತ್ತುಬದ್ಧ ಜಾಮೀನಿನಲ್ಲಿ ಸಾಕ್ಷö್ಯನಾಶ ಮಾಡುವಂತಿಲ್ಲ, ಕೋರ್ಟ್ ಅನುಮತಿ ಇಲ್ಲಿದೆ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ ಎಂದು ಸೂಚನೆ ನೀಡಿರುವ ನ್ಯಾಯಾಲಯ, ಷರತ್ತುಬದ್ಧ ಜಾಮೀನು ನೀಡಿದೆ.

