ರಾಜಕೀಯ ಸುದ್ದಿ

ಚುನಾವಣೆಗೆ ಮೊದಲೇ ಬಿಜೆಪಿ ಖಾತೆ ಓಪನ್

Share It

ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದಿದೆ.

ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಬಾನಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಜೊತೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 25 ಮಂದಿ ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಸಂಸದರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಿಲೇಶ್ ಕುಂಬಾನಿ ಸಲ್ಲಿಸಿದ್ದ ನಾಮಪತ್ರದಲ್ಲಿ 3 ಕಡೆ 3 ರೀತಿಯ ಸಹಿ ಇರುವ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ 3 ಬಾರಿ ಅವಕಾಶ ನೀಡಿದರೂ ಲೋಪ ಸರಿಪಡಿಸಿಕೊಳ್ಳದ ಕಾರಣ ನಿಲೇಶ್ ಕುಂಬಾನಿ ಅವರ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗಿತ್ತು


Share It

You cannot copy content of this page