ಬೆಂಗಳೂರು:ಮೂಡಾ ಮತ್ತು ವಾಲ್ಮೀಕಿ ಹಗರಣಗಳ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ ಶಾಸಕರು, ಸದಮದಲ್ಲಿಯೇ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ, ಅವರ ರಾಜೀನಾಮೆಗೆ ಒತ್ತಾಯಿಸಿದೆ. ಕಾಂಗ್ರೆಸ್ ಒಳಗೆ ಇರುವ ಸಿದ್ದರಾಮಯ್ಯ ವಿರೋಧಿ ಬಣದ ಆಸೆಯನ್ನು ಚಿಗುರಿಸಿ, ಅವರನ್ನು ಅಧಿಕಾರದಿಂದ ಕೆಳಗಿಳಿಯುವಂತೆ ಮಾಡುವ ಆಲೋಚನೆ ಬಿಜೆಪಿ ನಾಯಕರದ್ದು. ಹೀಗಾಗಿ, ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದೆ.
ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅಗತ್ಯವಿರುವ ಎಲ್ಲ ಹೋರಾಟಗಳನ್ನು ಸಂಘಟಿಸಲು ಹೈಕಮಾಂಡ್ ಅಪ್ಪಣೆ ನೀಡಿದ್ದು, ಅದರಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಒಳಗೆ ಗದ್ದಲ ಎಬ್ಬಿಸಿದೆ. ಜತೆಗೆ ಆಹೋರಾತ್ರಿ ಧರಣಿಯ ಮೂಲಕ ಸರಕಾರವನ್ನು ಹಣಿಯಲು ಮುಂದಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ಶಾಸಕರು, ವಿಧಾನಸಭೆಯಲ್ಲಿಯಾಎ ಮಲಗಲು ತೀರ್ಮಾನಿಸಿದ್ದಾರೆ. ಅದಕ್ಕೆ ಅಗತ್ಯವಾದ ಸಿದ್ಧತೆಗಳನ್ನು ನಡೆಸಿಕೊಂಡಿದ್ದು, ಸದನದಲ್ಲಿಯೇ ರಾತ್ರಿಯಿಡೀ ಕಳೆಯಲಿದ್ದಾರೆ.
ಅಹೋರಾತ್ರಿ ಹೋರಾಟದ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಬಿಜೆಪಿ ಉದ್ದೇಶವಾಗಿದ್ದು, ಮೂಡಾ ಹಗರಣದಲ್ಲಿ ಸಿಎಂ ರಾಜೀನಾಮೆ ಕೊಡಿಸಿಯೇ ಸಿದ್ದ ಎಂಬ ಹಠಕ್ಕೆ ಬಿಜೆಪಿ ನಾಯಕರು ಬಂದಿದ್ದಾರೆ ಎನ್ನಲಾಗಿದೆ. ಹೀಗಾಗಿ, ಅಹೋರಾತ್ರಿ ಧರಣಿ ನಡೆಯುತ್ತಿದ್ದು ಸರಕಾರದ ಮುಂದಿನ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ.