ಬೆಂಗಳೂರು: ಬೆಂಗಳೂರಿನ ರಸ್ತೆಗಳಲ್ಲಿ ಬಿಎಂಟಿಸಿ ಬಸ್‌ಗಳ ಅಬ್ಬರಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕೆಲಸ ಅರಸಿ ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದ 20 ವರ್ಷದ ಯುವತಿ ಹನ್ನಾ ಇನಕಾ, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕೆ.ಆರ್. ಪುರಂ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದೆ. ಹನ್ನಾ ಅವರು ಬೈಕ್ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದಾಗ, ವೇಗವಾಗಿ ಬಂದ ಇವಿ ಬಸ್ ಬೈಕ್‌ಗೆ ಸ್ಪರ್ಶಿಸಿದೆ. ಈ ವೇಳೆ ಸಮತೋಲನ ತಪ್ಪಿ ಕೆಳಗೆ ಬಿದ್ದ ಹನ್ನಾ ಅವರ ತಲೆಯ ಮೇಲೆ ಬಸ್ ಚಕ್ರ ಹರಿದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಬಿಎಂಟಿಸಿ, ಇತ್ತೀಚಿನ ದಿನಗಳಲ್ಲಿ ಅಜಾಗರೂಕ ಚಾಲನೆಯಿಂದಾಗಿ ಜನರ ಪಾಲಿಗೆ ‘ಕಿಲ್ಲರ್’ ಆಗಿ ಬದಲಾಗುತ್ತಿದೆಯೇ ಎಂಬ ಭಯ ಕಾಡುತ್ತಿದೆ. ಚಾಲಕರ ನಿರ್ಲಕ್ಷ್ಯ ಹಾಗೂ ರ‍್ಯಾಶ್ ಡ್ರೈವಿಂಗ್‌ಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

