ಅಪರಾಧ ಸುದ್ದಿ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 15 ಜನರ ಸಾವು, 80ಕ್ಕೂ ಹೆಚ್ಚು ಜನರಿಗೆ ಗಾಯ

Share It

ಇಸ್ಲಾಮಾಬಾದ್ : ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಇಸ್ಲಾಮಾಬಾದ್‌ನ ಇಮಾಮ್ ಬರ್ಗಾ ಖದೀಪತ್ ಮಸೀದಿ ಬಳಿ ಸ್ಫೋಟ ಸಂಭವಿಸಿದ್ದು, ಪ್ರಾರ್ಥನೆಗೆ ಸೇರಿದ್ದ ನೂರಾರು ಜನರ ನಡುವೆ ಸ್ಫೋಟಗೊಂಡಿದೆ. ಇದರಿಂದ ಜನರು ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ ಎಂದು ವರದಿಯಾಗಿದೆ.

ಭದ್ರತಾ ಪಡೆ ಹಾಗೂ ಸ್ಥಳೀಯ ಪೊಲೀಸರು ಗಾಯಾಳುಗಳ ರಕ್ಷಣೆ ಮತ್ತು ಪರಿಶೀಲನೆಯಲ್ಲಿ ತೊಡಗಿದ್ದು, ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.


Share It

You cannot copy content of this page