ಅಪರಾಧ ಸುದ್ದಿ

ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

Share It

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ತಪಾಸಣೆ ನಡೆಸಿ ಸಊಕ್ತ ಬಂದೋಬಸ್ತ್ ಒದಗಿಸಿದ್ದಾರೆ.

ನಗರ ಪೊಲೀಸ್ ಇಲಾಖೆಯ ವಿಶೇಷ ಘಟಕ(ಸ್ಪೆಷಲ್ ಬ್ರ‍್ಯಾಂಚ್)ದ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಎಚ್ಚೆತ್ತ ಪೊಲೀಸರು ಕೂಡಲೇ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ, ಯಾವುದೇ ರೀತಿಯ ಸ್ಫೋಟಕ ವಸ್ತುಗಳಾಗಲಿ, ಬಾಂಬ್ ಆಗಲಿ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ನಗರದ ಸೈಂಟ್ ಫಿಲೋಮಿನಾ, ಸೈಂಟ್ ಮಾರ್ಥಾಸ್, ಜೆಎಂಜೆ, ಆಸ್ಪತ್ರೆ ಸೇರಿದಂತೆ ಆರೇಳು ಆಸ್ಪತ್ರೆಗಳಲ್ಲಿ ಈಗಾಗಲೇ ಇಡಲಾಗಿರುವ ಬಾಂಬ್ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಭಾನುವಾರ ರಾತ್ರಿ ೮ ಗಂಟೆ ಸುಮಾರಿಗೆ ವಿಶೇಷ ಘಟಕದ ಇ-ಮೇಲ್ ಖಾತೆಗೆ ಬಂದಿರುವ ಇ-ಮೇಲ್‌ನಲ್ಲಿ ಬರೆಯಲಾಗಿತ್ತು.

ತಕ್ಷಣ ಎಚ್ಚೆತ್ತ ಪೊಲೀಸರು ಕೂಡಲೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿ ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಸಂಬAಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಗರ ಪೊಲೀಸ್ ಘಟಕದ ವಿಶೇಷ ಘಟಕ (ಎಸ್‌ಬಿ)ದ ಇ-ಮೇಲ್ ವಿಳಾಸಕ್ಕೆ ನಗರದ ಕೆಲ ಆಸ್ಪತ್ರೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿತ್ತು. ಕೂಡಲೇ ಎಲ್ಲಾ ಆಸ್ಪತ್ರೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಇದೊಂದು ಹುಸಿ ಬಾಂಬ್ ಸಂದೇಶ ಎಂಬುದು ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.


Share It

You cannot copy content of this page