ಬಾಗಲಕೋಟೆ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜಿಲ್ಲಾ ನ್ಯಾಯಾಲಯದ ಇ-ಮೇಲ್‌ಗೆ ಬಂದಿರುವ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬುದಾಗಿತ್ತು. ಇದರಿಂದ ನ್ಯಾಯಾಲಯದ ಸಿಬ್ಬಂದಿ, ನ್ಯಾಯಾಧೀಶರು ಎಲ್ಲೋ ಆತಂಕಕ್ಕೆ ಒಳಗಾದರು. ತಕ್ಷಣವೇ ಎಲ್ಲರೂ ನ್ಯಾಯಾಲಯದಿಂದ ಹೊಗೆ ಓಡಿ ಬಂದಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ನಿಷ್ಕಿçಯ ದಳದ ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಆವರಣದ ಸುತ್ತಲೂ ಜನಸ್ತೋಮವೇ ಸೇರಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಿಶೀಲನೆಯಲ್ಲಿ ತೊಡಗಿದ್ದಾರೆ.

