ಬೆಂಗಳೂರು: ಬೆಂಗಳೂರು ಹೃದಯಭಾಗದಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜೆ.ಸಿ.ರಸ್ತೆಯಲ್ಲಿರುವ ಪಾಸ್ಪೋರ್ಟ್ ಕಚೇರಿಯ ಅಧಿಕೃತ ಇ-ಮೇಲ್ ಬಂದ ಸಂದೇಶದಲ್ಲಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿತ್ತು. ಇದರಿಂದ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಾರ್ವಜನಿಕರನ್ನು ಕರೆದುಕೊಂಡು ಗಾಬರಿಯಿಂದ ಹೊರಗೆ ಓಡಿಬಂದರು.
ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಲ್ಸನ್ ಗಾಡನ್ ಮತ್ತು ಎಸ್.ಜೆ. ಗಾರ್ಡನ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಾಂಬ್ ನಿಷ್ಕಿçಯ ದಳದ ಸಿಬ್ಬಂದಿಯನ್ನು ಕರೆಸಿ ತಪಾಸಣೆ ನಡೆಸಿದರು. ಆದರೆ, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.

