BREAKING :ರಾಜ್ಯದಲ್ಲಿ ಕೊರೊನಾ ಸೋಂಕಿಗೆ 2 ನೇ ಬಲಿ : ಬೆಳಗಾವಿಯಲ್ಲಿ 70 ವರ್ಷದ ವೃದ್ಧ ಸಾವು.!
ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಬೆನಕನಹಳ್ಳಿ ನಿವಾಸಿ 70 ವರ್ಷದ ವೃದ್ಧರೊಬ್ಬರಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಡರಾತ್ರಿ ಸೋಂಕಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.


