ಕೇಂದ್ರ ಸರ್ಕಾರದ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿಗೆ ಸಂಬಂಧಿಸಿದಂತೆ ಮಹತ್ವದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ಮತ್ತು ಹಣಕಾಸು ಕ್ಷೇತ್ರದಲ್ಲಿ ಅರ್ಹತೆ ಹೊಂದಿರುವ ಯುವಕರಿಗೆ ಸರ್ಕಾರಿ ವಲಯದಲ್ಲಿ ಭದ್ರ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಆನ್ಲೈನ್ ಅರ್ಜಿ ಪ್ರಕ್ರಿಯೆ ಫೆಬ್ರವರಿ 5ರಿಂದ ಆರಂಭವಾಗಲಿದ್ದು, ಮಾರ್ಚ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿಂಗಡಣೆ:
ಈ ನೇಮಕಾತಿ ಎರಡು ವಿಭಾಗಗಳಲ್ಲಿ ನಡೆಯಲಿದೆ.
- ಟೆಲಿಕಾಂ ವಿಭಾಗ – 95 ಹುದ್ದೆಗಳು
- ಹಣಕಾಸು ವಿಭಾಗ – 25 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಟೆಲಿಕಾಂ ವಿಭಾಗಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್, ಟೆಲಿಕಾಂ, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಿಕಲ್ ಅಥವಾ ಇನ್ಸ್ಟ್ರುಮೆಂಟೇಶನ್ ವಿಭಾಗಗಳಲ್ಲಿ ಕನಿಷ್ಠ 60 ಶೇಕಡಾ ಅಂಕಗಳೊಂದಿಗೆ BE ಅಥವಾ B.Tech ಪದವಿಯನ್ನು ಹೊಂದಿರಬೇಕು.
ಹಣಕಾಸು ವಿಭಾಗಕ್ಕೆ ಅರ್ಹರಾಗಲು ಅಭ್ಯರ್ಥಿಗಳು CA ಅಥವಾ CMA ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷವಾಗಿದ್ದು, ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ದೊರೆಯುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ಹೆಚ್ಚುವರಿ ಸಡಿಲಿಕೆ ನೀಡಲಾಗುತ್ತದೆ.
ಸಂಬಳ ಮತ್ತು ಸೌಲಭ್ಯಗಳು :
ಆಯ್ಕೆಯಾದ ಅಭ್ಯರ್ಥಿಗಳಿಗೆ IDA ವೇತನ ಶ್ರೇಣಿಯ E-3 ಹಂತದಡಿ ತಿಂಗಳಿಗೆ 24,900 ರೂ. ರಿಂದ 50,500 ರೂ. ವರೆಗೆ ಸಂಬಳ ನೀಡಲಾಗುತ್ತದೆ. ತರಬೇತಿ ಅವಧಿ ಪೂರ್ಣಗೊಂಡ ನಂತರ ಪದೋನ್ನತಿ, ವಿವಿಧ ಭತ್ಯೆಗಳು ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗುತ್ತವೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಆಯ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ನಡೆಯಲಿದೆ. ಈ ಪರೀಕ್ಷೆಯನ್ನು ಮಾರ್ಚ್ 29ರಂದು ನಡೆಸುವ ಸಾಧ್ಯತೆ ಇದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 2,500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 1,250 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಮಾರ್ಚ್ 8ರಿಂದ 15ರವರೆಗೆ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.
ಉತ್ತಮ ಸಂಬಳ, ಸ್ಥಿರ ಉದ್ಯೋಗ ಹಾಗೂ ವೃತ್ತಿಜೀವನದಲ್ಲಿ ಬೆಳವಣಿಗೆ ಸಾಧ್ಯತೆ ಇರುವ ಈ ಬಿಎಸ್ಎನ್ಎಲ್ ನೇಮಕಾತಿ ಎಂಜಿನಿಯರಿಂಗ್ ಮತ್ತು ಹಣಕಾಸು ಹಿನ್ನೆಲೆಯ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಒಳಿತು.

