ಅಪರಾಧ ರಾಜಕೀಯ ಸುದ್ದಿ

ಪೋಕ್ಸೋ ಪ್ರಕರಣ: ಸಿಐಡಿ ಅಧಿಕಾರಿಗಳ ಮುಂದೆ ಹಾಜರಾದ ಬಿಎಸ್ ಯಡಿಯೂರಪ್ಪ

Share It

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿ-2012) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ತಡೆಯಾಜ್ಞೆ ನೀಡಿದೆ.
ಪೋಲೀಸ್ ದೂರಿನ ಪ್ರಕಾರ, ಯಡಿಯೂರಪ್ಪ ವಿರುದ್ಧ 17 ವಯಸ್ಸಿನ ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವರ್ಷದ ಫೆಬ್ರವರಿ ಎರಡರಂದು ಇಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ತನ್ನ ನಿವಾಸದಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದರು. ಯಡಿಯೂರಪ್ಪ ಆರೋಪ ತಳ್ಳಿ ಹಾಕಿದ್ದು, ತಮ್ಮ ವಿರುದ್ಧ ಷಡ್ಯಂತ್ರ ನಡೆಸುತ್ತಿರುವವರಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.


Share It

You cannot copy content of this page