ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಕೃತ್ಯಗಳನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿಕೋರಿ ಬಿಟಿಎಂ ವಿಧಾನಸಭಾ ಕ್ಷೇತ್ರದ ಫೋರಮ್ ಮಾಲ್ ಹತ್ತಿರ ಮತ್ತು ಗಂಗೋತ್ರಿ ವೃತ್ತದ ಹತ್ತಿರ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಬಿಟಿಎಂ ಕಾಂಗ್ರೆಸ್ ನಿಂದ ಮೌನ ಶ್ರದ್ಧಾಂಜಲಿ ಆಯೋಜಿಸಲಾಗಿತ್ತು.
ಘಟನೆಯಲ್ಲಿ ಮಡಿದ ಕುಟುಂಬಗಳಿಗೆ ಧೈರ್ಯ ತುಂಬುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ನೀಡಲಾಯಿತು. ಘಟನೆಯಲ್ಲಿ ಭದ್ರತಾ ವೈಫಲ್ಯವಿರುವುದು ಕಂಡುಬಂದಿದ್ದು, ಈ ಸಂಬಂಧ ಕೇಂದ್ರ ಸರಕಾರ ಸೂಕ್ತ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತತಿಭಟನಾ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪೆಹಲ್ಗಾಮ್ ಉಗ್ರರ ಕೃತ್ಯವನ್ನು ಖಂಡಿಸಿದರು. ಈ ಮೌನ ಶ್ರದ್ಧಾಂಜಲಿಯಲ್ಲಿ ಮಾಜಿ ಬಿಬಿಎಂಪಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಎಲ್ಲಾ ಕ್ಷೇತ್ರದ ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.