ಶ್ರೀನಗರ : ಪ್ರವಾಸಿಗರ ಬಸ್ ಉರುಳಿಬಿದ್ದ ಪರಿಣಾಮ ಬಸ್ ನಲ್ಲಿ 21 ಜನರು ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ ಉಧಮ್ ಪುರ ಜಿಲ್ಲೆಯ ರಾಮನಗರದ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

