ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೇವನಹಳ್ಳಿಯ ಅಣ್ಣೇಶ್ವರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರುಗಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳು ಸರಿಯಾಗಿ ತಲುಪಿದೆಯೇ ಇಲ್ಲವೇ ಎಂಬುದನ್ನು ಖಚಿತ ಪಡಿಸಿಕೊಳ್ಳುವ ಜೊತೆಗೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಜನಪರವಾದ ಯೋಜನೆಗಳನ್ನು ಜಾರಿ ತರುವ ಬಗ್ಗೆ ಮಹಿಳೆಯರು ಹಿರಿಯ ನಾಗರಿಕರಿಗೆ ಮನವರಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನೆಮನೆ ಪ್ರಚಾರ ನಡೆಸಿದರು.
ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ, ರೈತರಿಗೆ ಎಲ್ಲಾ ವರ್ಗದ ಜನರಿಗೆ ಸಹಾಯ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ನುಡಿದಂತೆ ನಡೆದು ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ವಿಶ್ವಾಸವನ್ನು ಕಾಂಗ್ರೆಸ್ ಗಳಿಸಿದೆ ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವನ್ಯಾಯ, ಮಹಿಳಾ ನ್ಯಾಯ, ರೈತನ್ಯಾಯ, ಶ್ರಮಿಕನ್ಯಾಯ, ಪಾಲುದಾರಿಕೆ ನ್ಯಾಯ ಎಂಬ ಬಡವರ ಪರವಾದ ಐದು ಯೋಜನೆಗಳನ್ನು ಜಾರಿ ಮಾಡಲಿದೆ ಈ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸುಧಾರಣೆ ಹೊಂದಬೇಕು ಎಂಬುದು ಕಾಂಗ್ರೆಸ್ ನ ಗುರಿಯಾಗಿದೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಕೆಲಸ ಮಾಡಿದ್ದೇವೆ ಜನರು ನಮಗೆ ಆಶೀರ್ವಾದ ಮಾಡುತ್ತಾರೆ, ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುನಿರಾಜಪ್ಪ, ಮುಖಂಡರಾದ ಕಾಂತರಾಜು, ವೆಂಕಟೇಶ್, ಚೇತನ್, ಆನಂದ್, ಅಂಬರೀಶ್, ಪ್ರಕಾಶ್, ನವೀನ್, ಮೋಹನ್ ರಾಜ್, ಚರಣ್ ಮುಂತಾದವರು ಇದ್ದರು.