ಅಪರಾಧ ರಾಜಕೀಯ ಸುದ್ದಿ

24 ಸಾವಿರ ಶಿಕ್ಷಕರ ನೇಮಕಾತಿ ರದ್ದು

Share It


ಕೋಲ್ಕತ್ತಾ: ಪಶ್ಚಿಮ ಬಂಗಾಳ ಸರಕಾರ ನಡೆಸಿದ್ದ 24 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯನ್ನು ಅನೂಜರ್ಿಗೊಳಿಸಿ, ಕೊಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದು ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಭಾರಿ ಮುಖಭಂಗ ತರಿಸಿದೆ.

ನ್ಯಾಯಮೂತರ್ಿಗಳಾದ ದೇಬಂಗ್ಸು ಬಸಾಕ್ ಮತ್ತು ಎಂಡಿ ಶಬ್ಬರ್ ರಶೀದಿ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ- 2016 ಮೂಲಕ ನಡೆದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದರು. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡು ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸಿಬಿಐಗೆ ಹೈಕೋಟರ್್ ನಿದರ್ೇಶನ ನೀಡಿದೆ.

ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಅಜರ್ಿದಾರರು ಮಾಡಿದ ಮನವಿಯನ್ನೂ ವಿಭಾಗೀಯ ಪೀಠವು ತಿರಸ್ಕರಿಸಿಸುವ ಜತೆಗೆ, ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಬಂಗಾಳ ಶಾಲಾ ಸೇವಾ ಆಯೋಗಕ್ಕೆ ಸೂಚಿಸಿತು. ಆದೇಶ ಹೊರಬಿದ್ದ ಬೆನ್ನಲ್ಲೇ, ಕೋಟರ್್ ಹೊರಗೆ ಕಾಯುತ್ತಿದ್ದ ನೂರಾರು ಆಕಾಂಕ್ಷಿಗಳು ಸಂಭ್ರಮಿಸಿದರು. “ನಾವು ಈ ದಿನಕ್ಕಾಗಿ ಕಾಯುತ್ತಿದ್ದೆವು. ವರ್ಷಗಳ ಹೋರಾಟದ ನಂತರ ಅಂತಿಮವಾಗಿ ನ್ಯಾಯ ಸಿಕ್ಕಿದೆ ಎಂದು ಸಂತಸಪಟ್ಟರು.

ಅಜರ್ಿದಾರರ ಪರ ವಾದ ಮಂಡಿಸಿದ ವಕೀಲ ಫಿದರ್ೌಸ್ ಶಮೀಮ್ ಅವರು, 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯಥರ್ಿಗಳು ಎಸ್ಎಲ್ಎಸ್ಟಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ, ಆಯೋಗವು 25,753 ನೇಮಕಾತಿ ಪತ್ರಗಳನ್ನು ನೀಡಿ ಅಕ್ರಮ ಎಸಗಿತ್ತು. ಸುಪ್ರೀಂ ಕೋಟರ್್ನ ನಿದರ್ೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂತರ್ಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. ಪ್ರಕರಣದ ಕುರಿತು ಪರ-ವಿರೋಧದ ಹಲವು ಅಜರ್ಿಗಳ ವಿಚಾರಣೆಯನ್ನು ಪೀಠವು ಕಳೆದ ಮಾಚರ್್ 20ರಂದು ಮುಕ್ತಾಯಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು.

ಇದಕ್ಕೂ ಮೊದಲು ವಿಚಾರಣೆ ನಡೆಸಿದ್ದ ಮಾಜಿ ನ್ಯಾಯಮೂತರ್ಿ ಅಭಿಜಿತ್? ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿತ್ತು. ವಿಚಾರಣೆ ನಡೆಸಿದ ಸಿಬಿಐ, ಪ್ರಕರಣದಲ್ಲಿ ಮಾಜಿ ಶಿಕ್ಷಣ ಸಚಿವ, ಟಿಎಂಸಿ ನಾಯಕ ಪಾರ್ಥ ಚಟಜರ್ಿ ಸೇರಿದಂತೆ ಶಾಲಾ ಸೇವಾ ಆಯೋಗದ ಹಲವು ಅಧಿಕಾರಿಗಳನ್ನು ಬಂಧಿಸಿತ್ತು.


Share It

You cannot copy content of this page