ತುಮಕೂರು: ಸೇತುವೆ ಗೋಡೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ಬೆಂಕಿಯಲ್ಲಿ ಮೂವರು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕೋರಗೆರೆ ಸೇತುವೆಯ ಮೇಲೆ ಘಟನೆ ನಡೆದಿದೆ.
ವೇಗವಾಗಿ ಬಂದ ಕಾರು ಸೇತುವೆ ತಡೆಗೋಡೆಗೆ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.
ಇದರ ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಜೀವ ದಹನವಾಗಿದ್ದು, ಒಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಹುಳಿಯಾರು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ.

