ಚಿತ್ರದುರ್ಗದ ಮನೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಕೊಲೆಯಲ್ಲ, ಆತ್ಮಹತ್ಯೆ ಎಂದು ದೃಢ

15
Share It

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮನೆಯೊಂದರಲ್ಲಿ ಪತ್ತೆಯಾದ ಒಂದೇ ಕುಟುಂಬದ ಐವರ ಮೃತದೇಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ವರದಿ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಂಡುಬಂದಿದೆ.

ಚಿತ್ರದುರ್ಗದ ಮನೆಯೊಂದರಲ್ಲಿ ಜಗನಾಥ್ ರೆಡ್ಡಿ ಎಂಬುವವರ ಮನೆಯಲ್ಲಿ ೨೦೨೩ ಡಿ.೨೮ರಂದು ಮನೆಯೊಂದರಲ್ಲಿ ಐವರ ಮೃತದೇಹ ಪತ್ತೆಯಾಗಿದ್ದವು. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದಿತ್ತಾದರೂ, ಕುಟುಂಬದ ಹತ್ತಿರದ ಸಂಬಂಧಿ ಎಂದು ಹೇಳಿಕೊಂಡು ಪವನ್ ಎಂಬುವವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಐವರು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ, ಸೂಕ್ತ ತನಿಖೆ ನಡೆಸಿ ಕಾರಣ ಪತ್ತೆಹಚ್ಚಬೇಕು ಎಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೃತದೇಹದ ಸ್ಯಾಂಪಲ್‌ಗಳನ್ನು, ಅಸ್ಥಿಪಂಜರವನ್ನು ಎಫ್‌ಎಸ್‌ಎಲ್ ಗೆ ಕಳುಹಿಸಿಕೊಡಲಾಗಿತ್ತು.

ಎಫ್‌ಎಸ್‌ಎಲ್ ತಂಡ ೭೧ ಸ್ಯಾಂಪಲ್ ಪಡೆದು ಪರೀಕ್ಷೆ ನಡೆಸಿತ್ತು. ದಾವಣಗೆರೆ, ಬೆಂಗಳೂರಿನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಸೂಕ್ಷ್ಮ ಪ್ರಕರಣವಾದ್ದರಿಂದ ಹೆಚ್ಚಿನ ಮುತುವರ್ಜಿವಹಿಸಿ ಪ್ರಕರಣದ ತನಿಖೆ ನಡೆಸಲಾಗಿತ್ತು. ಎಫ್ ಎಸ್‌ಎಲ್‌ವರದಿಯಲ್ಲಿ ನಿದ್ರೆ ಮಾತ್ರೆ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮೃತರೆಲ್ಲರೂ ಮಾನಸಿಕ ಖಿನ್ನತೆ, ಒತ್ತಡದಿಂದ ಮೃತಪಟ್ಟಿರುವ ಶಂಕೆಯಿದ್ದು, ಮನೆಯಲ್ಲಿ ಸೈನೈಡ್, ನಿದ್ರೆ ಮಾತ್ರೆಗಳು ಪತ್ತೆಯಾಗಿವೆ. ಮುಂದಿನ ತನಿಖೆಗೆ ಪೊಲೀಸ್ ಇನ್ಸ್ಪೆಕ್ಟರ್ ಗೆ ಅಧಿಕಾರ ನೀಡಲಾಗಿದೆ ಎಂದು ಚಿತ್ರದುರ್ಗ ಎಸ್‌ಪಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದ್ದಾರೆ.


Share It

You cannot copy content of this page