ಅಪರಾಧ ರಾಜಕೀಯ ಸುದ್ದಿ

ಸಿದ್ದರಾಮಯ್ಯ ತವರೂರಲ್ಲಿ ಜಾತೀಯತೆ ವಿಷಬೀಜ

Share It

ಮೈಸೂರು: ಜಾತೀಯತೆ ಹೋಗಲಾಡಿಸಬೇಕು ಎಂದು ಸದಾ ಭಾಷಣ ಮಾಡುವ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೇ ಜಾತೀಯತೆ ಪರಾಕಾಷ್ಠೆ ಮುಟ್ಟಿದ್ದು, ಅಸ್ಪೃಶ್ಯತೆ ಆಚರಣೆ ಮೂಲಕ ಇಡೀ ದೇಶದ ಗಮನ ಸೆಳೆದಿದೆ.

ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾದ ಕ್ಷೇತ್ರದ ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ಸ್ವತಃ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್.ಸಿ.ಮಹದೇವಪ್ಪ ಅವರ ತಾಲೂಕಿನ ಗ್ರಾಮ ಇದಾಗಿದ್ದು, ಇಲ್ಲಿನ ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಿಸಲಾಗಿದೆ.

ಈ ಸಂಬಂಧ ನವೀನ್ ಎಂಬ ಯುವಕ ತಹಸೀಲ್ದಾರ್‌ಗೆ ದೂರು ನೀಡಿದ್ದು, ವಿದ್ಯಾವಂತ ನಾಗರೀಕನಾದ ನನಗೆ ಗ್ರಾಮದ ಶಂಭುಮಹಾಲಿAಗೇಶ್ವರ ದೇವಸ್ಥಾನಕ್ಕೆ ಪ್ರವೇಶಿಸಲು ಅರ್ಚಕರು ಮತ್ತು ಗ್ರಾಮಸ್ಥರು ಅವಕಾಶ ನೀಡದೆ, ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದರು.

ಈ ವಿಷಯ ತಿಳಿದು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊAದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ. ತಹಶೀಲ್ದಾರ್, ವರುಣಾ ಠಾಣೆಯ ಪಿಎಸ್‌ಐ ಚೇತನ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ ನಿರ್ಬಂಧ ಹೇರಿದ್ದ ನವೀನ್ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಿದರು.

ಅಧಿಕಾರಿಗಳ ಸಮ್ಮುಖದಲ್ಲೇ ನವೀನ್ ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲೇ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸುವ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದಾರೆ. 21ನೇ ಶತಮಾನಕ್ಕೆ ಕಾಲಿಟ್ಟರೂ ಇಂಥ ಹೀನ ಪದ್ಧತಿ ಜೀವಂತವಾಗಿರುವುದು ಶೋಚನೀಯ. ಅದರಲ್ಲೂ ಮೌಢ್ಯಾಚರಣೆ, ಅನಿಷ್ಠ ಪದ್ಧತಿಗಳ ವಿರುದ್ದ ಮಾತನಾಡುತ್ತಿರುವ ಸಿಎಂ ತವರಿನಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಹೆಚ್.ಡಿ.ಮಹದೇವಪ್ಪನವರ ತಾಲೂಕಿನಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ಖಂಡನೀಯ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ತಹಶೀಲ್ದಾರ್ ಮಹೇಶ್ ಕುಮಾರ್, ಉಪ ತಹಶೀಲ್ದಾರ್ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿಗಳಾದ ಕೀರ್ತಿ ಕುಮಾರ್ ಮತ್ತು ಅಬ್ದುಲ್ ರಶೀದ್ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.


Share It

You cannot copy content of this page