ಸಿಬಿಎಸ್‌ಇ 2026ರ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಸುಮಾರು 25 ಲಕ್ಷ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು results.cbse.nic.in ಅಥವಾ cbse.gov.in ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು. ಡಿಜಿಲಾಕರ್ ಮೂಲಕವೂ ಲಭ್ಯವಿರುವ ಫಲಿತಾಂಶಗಳನ್ನು ರೋಲ್ ನಂಬರ್, ಶಾಲಾ ಸಂಖ್ಯೆ ಮತ್ತು ಅಡ್ಮಿಟ್ ಕಾರ್ಡ್ ಐಡಿ ಬಳಸಿ ಪರಿಶೀಲಿಸಬಹುದು.
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ (ಸೆಷನ್ 1) 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಈಗ ತೆರೆಬಿದ್ದಿದೆ. ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶಗಳು ಈಗ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

