ಉಪಯುಕ್ತ ಸುದ್ದಿ

ಸಿಬಿಎಸ್‌ಸಿ 12 ನೇ ತರಗತಿ ಫಲಿತಾಂಶ: ಬಾಲಕಿಯರದ್ದೇ ಮೇಲುಗೈ

Share It

ಬೆಂಗಳೂರು: ಕೇಂದ್ರೀಯ ಪರೀಕ್ಷಾ ಮಂಡಳಿಯ ಸಿಬಿಎಸ್‌ಸಿ 2024 ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆ ಬರೆದವರಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ, ಶೇ/0.65 ರಷ್ಟು ಹೆಚ್ಚಾಗಿದೆ ಎಂದು ಸಿಬಿಎಸ್‌ಸಿ ತಿಳಿಸಿದೆ.

ಶೇ.91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗುವ ಮೂಲಕ ಮತ್ತೊಮ್ಮೆ ಬಾಲಕಿಯರದ್ದೇ ಮೇಲುಗೈ ಆಗಿದೆ. ಈ ವರ್ಷ ಒಟ್ಟು 16,21,224 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತೇರ್ಗಡೆಯಾದವರ ಪೈಕಿ 24 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 1.16 ಲಕ್ಷ ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.


Share It

You cannot copy content of this page