ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಿಸಿಬಿ ನೊಟೀಸ್ ನೀಡಿದ್ದು, ಗುರುವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಅವರಿಗೆ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ 164 ಸ್ಟೇಟ್ ಮೆಂಟ್ ಪಡೆಯಲು ನೊಟೀಸ್ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣದ ಸಂಬಂಧ ಹೇಳಿಕೆ ದಾಖಲಿಸುವಂತೆ ಸೂಚನೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ದೂರನ್ನು ಆಧರಿಸಿ, ನಾಲ್ಕು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

