ಬೆಂಗಳೂರು: 2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರಕಾರ ಪ್ರಕಟಿಸಿದ್ದು, ಕರ್ನಾಟಕದ ಮೂವರು ಸಾಧಕರು ಪದ್ಮಶ್ರೀ ಪ್ರಶ್ತಿಗಳಿಗೆ ಭಾಜನರಾಗಿದ್ದಾರೆ.
ಮಂಡ್ಯದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆ ಪ್ರಖ್ಯಾತ ವೈದ್ಯ ಡಾ. ಸುರೇಶ್ ಹನಗವಾಡಿ ಮತ್ತು, ಸಮಾಜ ಸೇವೆಕಿ ಎಸ್.ಜಿ. ಸುಶೀಲಮ್ಮ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಈ ಮೂವರು ದಿಗ್ಗಜರನ್ನು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ.

