ಉಪಯುಕ್ತ ಸುದ್ದಿ

ನಾಳೆಯಿಂದ ಸಿಇಟಿ ಪರೀಕ್ಷೆ:3.49 ಲಕ್ಷ ವಿದ್ಯಾರ್ಥಿಗಳು ಹಾಜರು

Share It


ಬೆಂಗಳೂರು:
ನಾಳೆಯಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಲಿದ್ದು, ಏ. 18ರ ಗುರುವಾರ ಮತ್ತು ಏ. 19ರ ಶುಕ್ರವಾರ ಎರಡು ದಿನ ಪರೀಕ್ಷೆ ನಡೆಯಲಿದೆ.

ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟು 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ.

ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳು ಪ್ರವೇಶಾವಕಾಶ ಇರುವುದಿಲ್ಲ.

ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಒಂದು ವೇಳೆ ವಿದ್ಯಾರ್ಥಿಗಳು ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ.

ಪರೀಕ್ಷಾಥರ್ಿಗಳಿಗೆ ಸೂಚನೆಗಳು:

  • ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
  • ನೀಲಿ ಅಥವಾ ಕಪ್ಪು ಬಣ್ಣದ ಪೆನ್ ಮಾತ್ರ ಬಳಕೆಗೆ ಅವಕಾಶ.
  • ತುಂಬುದೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
  • ಮೊಬೈಲ್, ಬ್ಲೂಟೂತ್, ಟ್ಯಾಬ್ಲೆಟ್, ಕೈಗಡಿಯಾರ, ಕ್ಯಾಲಕ್ಯುಲೇಟರ್, ಆಭರಣ, ನೋಟ್ ಪ್ಯಾಡ್, ಐ-ಪಾಡ್, ಇಯರ್ ಫೋನ್ ಇತ್ಯಾದಿಗಳನ್ನು ತರುವಂತಿಲ್ಲ.
  • ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
  • ಓಎಂಆರ್ ಶೀಟ್ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್ ಕೋಡ್ ನಮೂದಿಸುವುದು ಕಡ್ಡಾಯ.
  • ಓಎಂಆರ್ ಶೀಟ್ನ ಕೆಳಭಾಗದಲ್ಲಿ ಅಭ್ಯಥರ್ಿಗಳು ಮರೆಯದೆ ಸಹಿ ಮಾಡಬೇಕು.
  • ಓಎಂಆರ್ ಶೀಟ್ನಲ್ಲಿರುವ ಟೈಮಿಂಗ್ ಮಾಕರ್್ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.
  • ಕೋವಿಡ್ ಇಲ್ಲದ ಕಾರಣ ಮಾಸ್ಕ್ಗೆ ಅವಕಾಶವಿಲ್ಲ
  • ಕುಡಿಯುವ ನೀರನ್ನು ಪಾರದರ್ಶಕ ಬಾಟಲಿಯಲ್ಲಿ ತರಲು ಅವಕಾಶವಿದೆ.

Share It

You cannot copy content of this page