ಹಾಸನ: ಕಬ್ಬಿಣದ ರಾಡ್‌ನಿಂದ ಹೊಡೆದು ತಂದೆಯನ್ನೇ ಸತಃ ಮಗ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶನಿವಾರ ನಡೆದಿದೆ.
ಸತೀಶ್ (60) ಎಂಬುವವರು ಮೃತ ವ್ಯಕ್ತಿಯಾಗಿದ್ದು, ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿದ ಆರೋಪಿ. ತಾಯಿ ಮತ್ತು ಮಗ ಕೆ.ಆರ್.ನಗರದಲ್ಲಿ ನೆಲೆಸಿದ್ದರು. ಇದೇ ವಿಷಯಕ್ಕೆ ತಂದೆ-ಮಗನ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ರಾತ್ರಿ ಗಲಾಟೆ ವಿಕೋಪಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ಕೊಲೆ ನಡೆದಿದೆ ಎನ್ನಲಾಗಿದೆ.
ತಂದೆಯ ಮಾತುಗಳಿಂದ ಕೋಪಗೊಂಡ ರಂಜಿತ್ ಸ್ಟೀಲ್ ರಾಡ್‌ನಿಂದ ತಂದೆಯ ತಲೆಗೆ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ತಂದೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

