ಬೆಂಗಳೂರು;: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಕೇಸ್ನ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.
ಚೆಕ್‌ಬೌನ್ಸ್ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1.25 ಕೋಟಿ ರೂ. ದಂಡ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಈ ಮೂವರೂ ಆರೋಪಿಗಳ ವಿರುದ್ಧ ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.