ಚಿಕ್ಕಮಗಳೂರು: ಮನೆಯ ಮೇಲೆ ಕಲ್ಲು ಎಸೆದರು ಎಂಬ ಆರೋಪದಲ್ಲಿ ಇಬ್ಬರು ಯುವಕರನ್ನು ಬಜರಂಗದಳ ಕಾರ್ಯಕರ್ತರು ಥಳಿಸಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತಂಕದ ವಾತಾವರಣ ಮೂಡಿಸಿದೆ.
ಹುಸೇನ್ ಹಾಗೂ ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಮೇಲೆ ಹಲ್ಲೆ ನಡೆಸಿದ ಭಜರಂಗ ದಳದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಎಸ್‌ಡಿಪಿಐ ಕಾರ್ಯಕರ್ತರು ಪಟ್ಟುಹಿಡಿದಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬಸವನಹಳ್ಳಿ ಪೊಲೀಸ್ ಠಾಣೆಯ ಬಳಿ ಹಿಂದೂಪರ ಸಂಘಟನೆ ಹಾಗೂ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಹೀಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

