ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಅವಾಂತರ ಮುಂದುವರಿದಿದ್ದು, ಮುಂಜಾಗೃತೆಯ ದೃಷ್ಟಿಯಿಂದ ನಾಳೆ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸುದ್ದಿಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿಲ್ಲೆಯಲ್ಲಿ ಮಳೆ ಅತಿಯಾಗಿ ಸುರಿಯುತ್ತಿದ್ದು, ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.