ಅಪರಾಧ ಸುದ್ದಿ

ಚಿಕ್ಕಮಗಳೂರು ಕೋಮು ಘರ್ಷಣೆ: ಅಪ್ರಾಪ್ತರು ಸೇರಿ ಆರು ಜನರ ಬಂಧನ

Share It

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಲ್ಲು ಎಸೆದ ಕಾರಣಕ್ಕೆ ಅನ್ಯಕೋಮಿನ ಯುವಕರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರು ಅಪ್ರಾಪ್ತರು ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ಅನ್ಯಕೋಮಿನ ಯುವಕರ ಮೇಲೆ ಹಲ್ಲೆ ನಡೆಸಲಾಗಿತ್ತು. ಅವರಿಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದು, ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಪಟ್ಟುಹಿಡಿದಿದ್ದರು. ಈ ಸಂಬAಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರು ಜನರನ್ನು ಬಂಧಿಸಿದ್ದಾರೆ.

ಬAಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅದರಲ್ಲಿ ಇಬ್ಬರು ಅಪ್ರಾಪ್ತರನ್ನು
ಹಾಸನದ ರಿಮ್ಯಾಂಡ್ ಹೋಮ್ ಗೆಕಳುಹಿಸಿಕೊಡಲಾಗಿದೆ. ಉಳಿದ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಪೊಲೀಸರು ಪ್ರಕರಣ ಸಂಬAಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Share It

You cannot copy content of this page