ವೈಟ್‌ಹೌಸ್
ಗಂಗಾವತಿ: ಬಿಸಿಯೂಟ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ತಾಲೂಕಿನ ಸಂಗಾಪುರ ಗ್ರಾಮದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮುಖ್ಯ ಶಿಕ್ಷಕಿ ಪುಷ್ಪಾವತಿ ಮತ್ತು ಸಹಶಿಕ್ಷಕ ಶರಣಬಸವರಾಜ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಅವರ ಸೂಚನೆ ಮೆರೆಗೆ ಡಿಡಿಪಿಐ ಈ ಅಮಾನತು ಶಿಕ್ಷೆ ನೀಡಿದ್ದಾರೆ.
ಅಶುದ್ಧ ನೀರಿನಿಂದ ಅಡುಗೆ ಮಾಡಿದ್ದರಿಂದ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂಬ ಪ್ರಾಥಮಿಕ ಮಾಹಿತಿ ಮೆರೆಗೆ ಇಲಾಖೆ ಕ್ರಮ ಕೈಗೊಂಡಿದೆ.