ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ

Share It

ಬೆಂಗಳೂರು: ಪೋಕ್ಸೋ ಪ್ರಕಣರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.

ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜತೆಗೆ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಅವರನ್ನು ಆರೋಪಿಗಳನ್ನಾಗಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸುಮಾರು 750 ಪುಟಗಳಿರುವ ಚಾರ್ಜ್ ಶೀಟ್ ಇದಾಗಿದ್ದು, 75 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸದಾಶಿವನಗರದ ತಮ್ಮ ಮನೆಯಲ್ಲಿ ಬಿಎಸ್‌ವೈ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಫೆ. 2 ರಂದು ನಡೆದಿದ್ದ ಘಟನೆಯಲ್ಲಿ ಯಡಿಯೂರಪ್ಪ ಅವರ ಮನೆಗೆ ತಾಯಿ ಜೊತೆ ತೆರಳಿದ್ದ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಾ. 14 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್‌ನಡಿ ಎಫ್‌ಐಆರ್ ದಾಖಲಾಗಿತ್ತು. ಮಾ. 14 ರಂದು ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿತ್ತು. ಏ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು.

ಸಂತ್ರಸ್ತೆ ತಾಯಿ ಸಾವನ್ನಪ್ಪಿದ್ದ ಕಾರಣದಿಂದ ಆಕೆಯ ಸಂತ್ರಸ್ತೆ ಪರವಾಗಿ ಸಂಬಂಧಿಕರೊಬ್ಬರು ರಿಟ್ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಜೂ. 12 ರಂದು ಬಿಎಸ್‌ವೈಗೆ ಸಿಐಡಿ ನೋಟಿಸ್ ನೀಡಿತ್ತು. ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜೂ. 12 ರಂದು ಅರೆಸ್ಟ್ ವಾರೆಂಟ್ ಕೋರಿ ಸಿಐಡಿ ಅರ್ಜಿ ಸಲ್ಲಿಕೆ ಮಾಡಿತ್ತು. ಬಳಿಕ ಹೈಕೋರ್ಟ್ ಬಿಎಸ್‌ವೈ ಬಂಧಿಸದಂತೆ ಸಿಐಡಿಗೆ ನಿರ್ದೇಶಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.


Share It

You cannot copy content of this page