ಅಪರಾಧ ರಾಜಕೀಯ ಸುದ್ದಿ

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ ಪೊಲೀಸರು

Share It

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಧಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಎಂಬವರ ಪುತ್ರಿ ನೇಹಾ ಹಿರೇಮಠ ಎಂಬಾಕೆಯನ್ನು ಕಾಲೇಜು ಆವರಣದಲ್ಲಿಯೇ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಇಲ್ಲಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು 3ನೇ ಜೆಎಂಎಫ್‌ಸಿ ಕೋರ್ಟ್​ಗೆ 483 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬಿಎಂಎಸ್ ಕಾಲೇಜು ಆವರಣದಲ್ಲಿ ಏ.18ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ಸವದತ್ತಿ ಮೂಲದ ಫಯಾಜ್ ಎಂಬಾತನನ್ನು ಬಂಧಿಸಲಾಗಿತ್ತು. ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕುಪಿತಗೊಂಡು ಚಾಕುವಿನಿಂದ ನೇಹಾಗೆ ಇರಿದು ಕೊಲೆ ಮಾಡಿದ್ದಾಗಿ ಆತನ ಒಪ್ಪಿಕೊಂಡಿದ್ದ. ವಿದ್ಯಾನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು‌ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದು, ಸರಕಾರ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವಹಿಸಿತ್ತು.

ಪೊಲೀಸ್ ವಿಚಾರಣೆಯ ವೇಳೆ ಪ್ರೀತಿ ನಿರಾಕರಿಸಿದ್ದರಿಂದ ಸಿಟ್ಟಾಗಿ ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದ. ಈ ಘಟನೆ ಖಂಡಿಸಿ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ವತಿಯಿಂದ ತೀವ್ರ ಪ್ರತಿಭಟನೆ ನಡೆದಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಸೇರಿ ಕೊಲೆಯಾದ ನೇಹಾಳ ತಂದೆ ಒತ್ತಾಯಿಸಿದ್ದರು.

ಪ್ರಕರಣದ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಎಸ್‌ಪಿ ಎನ್.ವೆಂಕಟೇಶ ನೇತೃತ್ವದಲ್ಲಿ 2 ತಿಂಗಳು 20 ದಿನಗಳವರೆಗೆ ತನಿಖೆ ನಡೆದಿದೆ. ಇದೀಗ ಡಿವೈಎಸ್‌ಪಿ ಎನ್.ಎಚ್.ಪೈಕ್ ಅವರು ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.


Share It

You cannot copy content of this page