ಅಪರಾಧ ಸುದ್ದಿ

ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

Share It

ಚಿಕ್ಕಬಳ್ಳಾಪುರ: ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಮೊಹಮ್ಮದ್ ಪುರ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಎರಡು ಗುಂಪುಗಳು ಪರಸ್ಪರ ದೋಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಸಂಬಂಧ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


Share It

You cannot copy content of this page