ಇಂದಿನಿಂದ 3 ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ನಂತರ ಸಿಎಂ ಸಿದ್ದರಾಮಯ್ಯ ಅವರು ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ ನಡೆಸಲು ಆರಂಭಿಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಬಹುಮುಖ್ಯವಾಗಿ ತಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬೇಕಾದರೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಲೀಡ್ ಪಡೆಯಲೇಬೇಕೆಂಬ ಟಾರ್ಗೆಟ್ ಅನ್ನು ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.