ಉಪಯುಕ್ತ ರಾಜಕೀಯ ಸುದ್ದಿ

ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಿ: ಸಿಎಂ ಸೂಚನೆ

Share It

ಬೆಂಗಳೂರು: ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಗರಂ ಆದ ಘಟನೆ ಜಿಲ್ಲಾಧಿಕಾರಿಗಳ ಸಭೆಯ ವೇಳೆ ನಡೆಯಿತು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಖಡಕ್ ಸೂಚನೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು‌

ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚಿಸಿದ ಸಿಎಂ,

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ ಕ್ರಮ
ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.


Share It

You cannot copy content of this page