ಬೆಂಗಳೂರು: ಬೆಂಗಳೂರಿನಲ್ಲಿ ಕೆಂಪೇಗೌಡರ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಎದುರಲ್ಲೇ ಇಂದು ಚಂದ್ರಶೇಖರ ಶ್ರೀಗಳು ಸಿಎಂ ಸೀಟನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದರು.
ಆದರೆ ಚಂದ್ರಶೇಖರ ಶ್ರೀಗಳ ಈ ಒತ್ತಾಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ವೇದಿಕೆಯಲ್ಲೇ ಉತ್ತರಿಸಿ, “ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಡುತ್ತದೆ, ನಾನು ದಿಢೀರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಬರುವುದಿಲ್ಲ” ಎಂದು ಸ್ವಾಮೀಜಿಗೆ ಹೇಳಿದ್ದರು.
ಆದಾಗ್ಯೂ ಚಂದ್ರಶೇಖರ ಶ್ರೀಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಲು ರಾಜ್ಯಾದ್ಯಂತ ಇರುವ ಕುರುಬ ಸಮುದಾಯದ ಮುಖಂಡರು ತೀವ್ರವಾಗಿ ವಿರೋಧಿಸಿದ್ದಾರೆ.
ಈ ಬಗ್ಗೆ ಕೋಲಾರದ ಕುರುಬರ ಶೆಫರ್ಡ್ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಮಾತನಾಡಿ, ” ಸಿಎಂ ಸಿದ್ದರಾಮಯ್ಯ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಿಸುವ ಯೋಚನೆ ಇದ್ದರೆ, ಅದು ಸಾಧ್ಯವೇ ಇಲ್ಲ” ಎಂದು ಎದಿರೇಟು ನೀಡಿದ್ದಾರೆ.

