ಬೆಂಗಳೂರು: ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,
ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು.
ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.