ಸುದ್ದಿ

ರಾಜಭವನದ ಕಡೆಗೆ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಸಿಎಂ ನಡೆ

Share It

ಬೆಂಗಳೂರು: ವಿಧಾನ ಸಭೆ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯ ದಿಢೀರ್ ಎಂದು ರಾಜಭವನಕ್ಕೆ ಭೇಟಿ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಅಧಿವೇಶನದಲ್ಲಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನೇ ಟಾರ್ಗೆಟ್ ಮಾಡಿಕೊಂಡು ಹೋರಾಟ ನಡೆಸುತ್ತಿದೆ. ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದ್ದು ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ರಾಜಭವನ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಸದನ ಸರಿಯಾಗಿ ನಡೆಸಲು ಬಿಡದೆ ಹೋರಾಟ ನಡೆಸುತ್ತಿರುವ ಬಿಜೆಪಿ ಶಾಸಕರ ನಡೆ ಮತ್ತು ಇಡಿ ಅಧಿಕಾರಿಗಳು ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುವಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಕಿರುಕುಳ ನೀಡಿರುವ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೂಡ ಸಿಎಂ ನೇರ ಹೊಣೆಗಾರರು ಎಂಬುದು ವಿರೋಧ ಪಕ್ಷಗಳ ಆರೋಪ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಡೆ ಇದೀಗ ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಆಡಳಿತ ಯಂತ್ರ ಅಸ್ಥಿರ ಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ದೂರು ಹೊತ್ತು ರಾಜಭವನಕ್ಕೆ ಹೋಗಿದ್ದಾರಾ ಅಥವಾ ಮತ್ತೇನಾದರೂ ಕಾರಣವಿದೆಯಾ ಎಂಬುದು ಇದೋಗ ಕುತೂಹಲಕ್ಕೆ ಕಾರಣವಾಗಿದೆ.


Share It

You cannot copy content of this page