ಅಪರಾಧ ರಾಜಕೀಯ ಸುದ್ದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ: ಯಾರ ಒತ್ತಡಕ್ಕೂ ಮಣಿಯಲ್ಲ ಎಂದ ಸಿಎಂ

Share It

ಬೆಂಗಳೂರು: ಧರ್ಮಸ್ಥಳ ಪ್ರರಕಣದಲ್ಲಿ ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಅಗತ್ಯ ಬಿದ್ರೆ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳು ಸೇರಿ ಕೆಲವರು ಎಸ್‌ಐಟಿ ರಚನೆ ಮಾಡಲು ಒತ್ತಾಯಿಸಿದ್ದಾರೆ. ಅವರು ಒತ್ತಾಯಿಸಿದ್ದಾರೆ ಎಂಬ ಕಾರಣಕ್ಕಲ್ಲ, ಅಗತ್ಯಬಿದ್ರೆ ಎಸ್‌ಐಟಿ ರಚನೆ ಮಾಡುತ್ತೇವೆ. ಈಗಾಗಲೇ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ ಎಂದರು.

ಹತ್ತು ವರ್ಷಗಳಿಂದ ಆತ ನಾಪತ್ತೆಯಾಗಿದ್ದ. ಇದೀಗ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾನೆ. ಅನೇಕ ಹೆಣಗಳನ್ನು ಹೂತಿರುವುದಾಗಿ ತಿಳಿಸಿದ್ದಾನೆ. ಈ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ನಾನು ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ ಚರ್ಚೆ ನಡೆಸುತ್ತೇನೆ ಎಂದರು.

ಪ್ರಕರಣ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಕಾನೂನು ಪ್ರಕಾರ ಏನು ಕ್ರಮವಾಗಬೇಕೋ ಅದು ಆಗೇ ಆಗುತ್ತದೆ. ಪೊಲೀಸರು ತಪ್ಪಿತಸ್ಥರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಾರೆ. ಸರಕಾರ ಅವರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.


Share It

You cannot copy content of this page