ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರು ಜಿಲ್ಲೆಯಲ್ಲಿ ಕೈಗೊಂಡಿದ್ದ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ.
ನಿಗದಿಯಂತೆ ಮಾರ್ಚ್ 12ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ, ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚರಂಜೀವಿ ಅವರು ಸಿಎಂ ಪ್ರವಾಸ ರದ್ದುಗೊಳಿಸಿದ ಮಾಹಿತಿಯನ್ನು ಹೊರಡಿಸಿದ್ದಾರೆ.
ವಿಧಾನಸಭೆಯ ಅಧಿವೇಶನಗಳು ನಡೆಯುತ್ತಿದ್ದು, ಸಿಎಂ ಅಧಿವೇಶನದಲ್ಲಿ ಭಾಗವಹಿಸಬೇಕಿರುವ ಕಾರಣಕ್ಕೆ ಕಾರ್ಯಕ್ರಮ ರದ್ದುಗೊಂಡಿದೆ ಎಂದು ಹೇಳಲಾಗಿದೆ. ಬೆಳಗ್ಗೆ 10 ಗಂಟೆಗೆ ಮೈಸೂರಿಗೆ ಹೊರಟು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ವಾಪಸ್ಸಾಗಬೇಕಿತ್ತು.

