ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಸಿಎಂ ಭೇಟಿ

Share It

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸ್ಥಳೀಯರ ಜೊತೆ ಕೆಲಹೊತ್ತು ಚರ್ಚೆ 20 ಕುಟುಂಬಗಳ ಸಂಕಷ್ಟ ಕೇಳಿ ಸ್ಥಳದಲ್ಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂಚಿಸಿದ ಸಿಎಂ

ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You May Have Missed

You cannot copy content of this page