ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ
ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ: ಕಾನೂನಿಗಿಂತ ದೊಡ್ಡವರು ಯಾರಿಲ್ಲ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ನಾನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು. ಕೋಮು ಗಲಭೆ ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.
ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ: ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.


