ಮೂಡಾ ಹಗರಣದಲ್ಲಿ ಸಿಎಂ ಪತ್ನಿ ಪಾತ್ರ : ಖಾಸಗಿ ಅರ್ಜಿಯ ತೀರ್ಪು ಕಾಯ್ದಿರಿಸಿದ ಕೋರ್ಟ್
ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಅವರು ಪಡೆದಿರುವ ಮೂಡಾ ಸೈಟಿನ ಹಗರಣಕ್ಕೆ ಸಂಬAಧಿಸಿದ ಖಾಸಗಿ ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.
ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪನ್ನು ಜ.೨೨ಕ್ಕೆ ಆದೇಶ ಕಾಯ್ದಿರಿಸಿದೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಸಾಕ್ಷö್ಯಗಳು ಕಂಡುಬAದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಪ್ರಕರಣದಲ್ಲಿ ಬಿಜೆಪಿ ಸಿಎಂ ರಾಜೀನಾಮೆಗೆ ಆಗ್ರಹಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಸಹ ಪ್ರಕರಣವನ್ನು ಕೈಬಿಟ್ಟಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಪ್ರಶ್ನಿಸಿ, ಸ್ನೇಹಮಯಿ ಕೃಷ್ಣ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.


