ಅಪರಾಧ ರಾಜಕೀಯ ಸುದ್ದಿ

ಡಾ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

Share It

ಬೆಂಗಳೂರು: ಚುನಾವಣೆ ಫಲಿತಾಂಶ ಬರುವ ಹೊತ್ತಿನಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಅವರಿಗೆ ಕಂಟಕವಾಗುವ ಸಾಧ್ಯತೆಯಿದೆ.

ಚುನಾವಣೆ ಪ್ರಚಾರದ ವೇಳೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಚಿಹ್ನೆಯಿರುವ ಲೆಟರ್ ಹೆಡ್ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ, ಅವರ ವಿರುದ್ಧ ದೂರು ದಆಖಲಾಗಿತ್ತು. ಚುನಾವಣಾ ಆಯುಕ್ತರು ಬೆಂಗಳೂರು ವಿಭಾಗಕ್ಕೆ ಪತ್ರ ಬರೆದು, ಪ್ರಕರಣ ದಾಖಲು ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಡಾ.ಕೆ.ಸುಧಾಕರ್ ಕೋವಿಡ್ ಸಂದರ್ಭದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ, ಅವರನ್ನು ವಿಧಾನ ಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಹೀನಾಯವಾಗಿ ಸೋಲುಕಂಡಿದ್ದರು. ಇದೀಗ ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೂ, ಕ್ಷೇತ್ರದಲ್ಲಿ ಗೆಲುವು ಅಷ್ಟು ಸುಲಭವಲ್ಲ ಎಂದು ಹೇಳಲಾಗುತ್ತಿದೆ. ಇದರ ನಡುವೆಯೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೊಂದು ಅವರ ಮೇಲೆರಗಿದೆ.


Share It

You cannot copy content of this page