ಬೆಂಗಳೂರು: KSRTC ಸಿಬ್ಬಂದಿ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವ ಸಂಬಂಧ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು 30 ಜನರಿಗೆ ನೇಮಕ ಪತ್ರವನ್ನು ನೀಡಲಾಯಿತು.

ಕೆ ಎಸ್ ಆರ್ ಟಿ ಸಿ ಕೇಂದ್ರ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ಹುದ್ದೆ ನಿರೀಕ್ಷೆಯಲ್ಲಿದ್ದ 30 ಮೃತಾವಲಂಬಿತರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿರವರು ನೇಮಕಾತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ರಿಜ್ವಾನ್ ನವಾಬ್, ಉಪಾಧ್ಯಕ್ಷರು , ಅಕ್ರಂ ಪಾಷ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಡಾ.ನಂದಿನಿದೇವಿ ಕೆ, ನಿರ್ದೇಶಕರು (ಸಿ & ಜಾ) ಉಪಸ್ಥಿತರಿದ್ದರು.

