ಅಪರಾಧ ಸಿನಿಮಾ ಸುದ್ದಿ

ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ದೂರು

Share It

ಬೆಂಗಳೂರು: ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಹಿಡಿದು ಪೋಸ್ ನೀಡುತ್ತಾ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಪಾರಂಪರಿಕ ಕಟ್ಟಡದ ಮುಂದೆ ರಜತ್ ಫೋಟೋ ಶೂಟ್ ಮಾಡಿಸಿದ್ದು, ಅದರಲ್ಲಿ ಸಿಗರೇಟ್ ಹಿಡಿದು ಫೋಟೋ ಮತ್ತು ವಿಡಿಯೋ ಮಾಡಿದ್ದಾರೆ. ಇದು ತಪ್ಪು ಎಂದು ಕನ್ನಡ ಪರ ಸಂಘಟನೆಯ ಕೆಲವರು ಮೈಸೂರಿನ ಲಕ್ಷಿö್ಮಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಜತ್ ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ಎದುರಿಸಿದ್ದರು. ಅವರನ್ನು ಬಂಧಿಸಿದ್ದ ಪೊಲೀಸರು, ಅನಂತರ ಜಾಮೀನಿನ ಮೇಲೆ ಬಿಟ್ಟಿದ್ದು, ಪ್ರಕರಣ ತನಿಖೆ ನಡೆಯುತ್ತಲೇ ಇದೆ. ಇದೀಗ ಮತ್ತೊಂದು ಯಡವಟ್ಟು ಮಾಡಿಕೊಂಡಿರುವ ರಜತ್ ವಿವಾದಕ್ಕೆ ಸಿಲುಕಿದ್ದಾರೆ.


Share It

You cannot copy content of this page