ಸುದ್ದಿ

ಜೂನ್ 30 ರೊಳಗೆ ಜಿಬಿಎ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ: ಸುಪ್ರೀಂ

Share It

ನವದೆಹಲಿ: ಜೂನ್ 30 ರೊಳಗೆ ಬೆಂಗಳೂರು ಮಹಾಣಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.

ಚುನಾವಣಾ ಆಯೋಗದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್.30 ರೊಳಗೆ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆಸರಕಾರ, ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಈಗಾಗಲೇ ಮೀಸಲಾತಿ ಕರಡು ಪಟ್ಟಿ ಬಿಡುಗಡೆಯಾಗಿದ್ದು, ಫೆ.೨೦ರೊಳಗೆ ಅಂತಿಮ ಮೀಸಲು ಪಟ್ಟಿ ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದ್ದು, ಮಾ.26ರೊಳಗೆ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದೆ.

ಮೇ.26 ರಂದು ಚುನಾವಣೆಯ ದಿನಾಂಕ ಘೋಷಣೆ ಮಾಡಬೇಕು. ಅಂದಿನಿAದ 45 ದಿನಗಳ ವ್ಯಾಪ್ತಿಯಲ್ಲಿ ಅಂದರೆ ಜೂನ್ 30ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದೆ.

Updating…


Share It

You cannot copy content of this page